TSK

TSK · ಆದಿಕಾಂಡ 32:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ

¶ ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.

ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.