¶ ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
TSK
TSK · ಆದಿಕಾಂಡ 33:11
Treasury of Scripture Knowledge references in ಕನ್ನಡ IRV.
ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.
ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.
¶ ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.
¶ ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.