¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
TSK
TSK · ಆದಿಕಾಂಡ 33:4
Treasury of Scripture Knowledge references in ಕನ್ನಡ IRV.
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
¶ ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
‹ಎದ್ದು ತನ್ನ ತಂದೆಯ ಕಡೆಗೆ ಬಂದನು.› ‹“ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.›