ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
TSK
TSK · ಆದಿಕಾಂಡ 35:23
Treasury of Scripture Knowledge references in ಕನ್ನಡ IRV.
ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
¶ ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
¶ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
¶ ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,
¶ ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
¶ ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
¶ ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:
ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
¶ ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;
ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,