TSK

TSK · ಆದಿಕಾಂಡ 36:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.

¶ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.

ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.

¶ ಇಸ್ರಾಯೇಲರ ಅರಸರು ಆಳ್ವಿಕೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಹಾಬಾ.