TSK

TSK · ಆದಿಕಾಂಡ 37:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.

ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, ‹“ನಿಮಗೆ ಏನು ಬೇಕು?”› ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.

ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ ‹“ನೀವು ಯಾರನ್ನು ಹುಡುಕುತ್ತೀರಿ?”› ಎಂದು ಕೇಳಿದನು.

ಯೇಸು ಆಕೆಗೆ, ‹“ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?”› ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.