ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
TSK
TSK · ಆದಿಕಾಂಡ 37:27
Treasury of Scripture Knowledge references in ಕನ್ನಡ IRV.
¶ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
¶ ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.
¶ ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.