¶ ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
TSK
TSK · ಆದಿಕಾಂಡ 37:9
Treasury of Scripture Knowledge references in ಕನ್ನಡ IRV.
¶ ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
¶ ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.
¶ ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
¶ ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.
ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.