¶ ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
TSK
TSK · ಆದಿಕಾಂಡ 38:26
Treasury of Scripture Knowledge references in ಕನ್ನಡ IRV.
ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.
¶ ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.
ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.
ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?
ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;