TSK

TSK · ಆದಿಕಾಂಡ 38:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.

ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.

ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.