TSK

TSK · ಆದಿಕಾಂಡ 39:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.

ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.

ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.

¶ ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.