TSK

TSK · ಆದಿಕಾಂಡ 39:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,

ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.

ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.

ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.

ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.

ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”

ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.

ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.