¶ ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.
TSK
TSK · ಆದಿಕಾಂಡ 4:26
Treasury of Scripture Knowledge references in ಕನ್ನಡ IRV.
ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.
ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”
¶ “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
¶ ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,