TSK

TSK · ಆದಿಕಾಂಡ 4:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.

¶ ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.

ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ

¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

‹ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.›

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.