TSK

TSK · ಆದಿಕಾಂಡ 4:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.

¶ ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.

ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.

¶ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.

¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.