ಆದಿಕಾಂಡ 37:26
TSK
¶ ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
TSK
Treasury of Scripture Knowledge references in ಕನ್ನಡ IRV.
¶ ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?
ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.