¶ ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
TSK
TSK · ಆದಿಕಾಂಡ 40:5
Treasury of Scripture Knowledge references in ಕನ್ನಡ IRV.
¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
¶ ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
¶ ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.
¶ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
¶ ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.