TSK

TSK · ಆದಿಕಾಂಡ 41:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.

¶ ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.

ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು.

ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.

ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.