TSK

TSK · ಆದಿಕಾಂಡ 41:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.

“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.