TSK

TSK · ಆದಿಕಾಂಡ 41:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.

ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

¶ ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

¶ ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.

‹ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ”› ಅಂದನು.