TSK

TSK · ಆದಿಕಾಂಡ 41:49

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.

ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.