ವಿಮೋಚನಕಾಂಡ 1:17
TSK
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
TSK
Treasury of Scripture Knowledge references in ಕನ್ನಡ IRV.
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
‹ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,›