TSK

TSK · ಆದಿಕಾಂಡ 42:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.

ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.

ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.