TSK

TSK · ಆದಿಕಾಂಡ 43:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.

ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.

ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;

ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.

¶ ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.

¶ ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, ‹“ನಿಮಗೆ ಸಮಾಧಾನವಾಗಲಿ”› ಎಂದು ಅವರಿಗೆ ಹೇಳಿದನು.

¶ ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, ‹“ನಿಮಗೆ›‹ಸಮಾಧಾನವಾಗಲಿ”› ಎಂದನು.

ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ ‹“ಸಮಾಧಾನವಾಗಲಿ ಎಂದನು”›