¶ ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.
TSK
TSK · ಆದಿಕಾಂಡ 43:29
Treasury of Scripture Knowledge references in ಕನ್ನಡ IRV.
¶ ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
¶ ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
¶ “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.
ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, ‹“ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು”› ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.