TSK

TSK · ಆದಿಕಾಂಡ 43:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.

ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.

¶ ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.

ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

‹ಮನುಷ್ಯಕುಮಾರನು ಬಂದನು,›‹ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು›‹ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.›‹ಆದರೆ ಜ್ಞಾನವು ಅದರ›‹ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ”› ಅಂದನು.