¶ ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.
TSK
TSK · ಆದಿಕಾಂಡ 43:8
Treasury of Scripture Knowledge references in ಕನ್ನಡ IRV.
ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
¶ ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.