TSK

TSK · ಆದಿಕಾಂಡ 44:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.

ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.

ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.