ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,
TSK
TSK · ಆದಿಕಾಂಡ 45:15
Treasury of Scripture Knowledge references in ಕನ್ನಡ IRV.
¶ ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
¶ ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.