TSK

TSK · ಆದಿಕಾಂಡ 46:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.

¶ ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.

ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.

ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.

ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.

ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.