¶ ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
TSK
TSK · ಆದಿಕಾಂಡ 46:12
Treasury of Scripture Knowledge references in ಕನ್ನಡ IRV.
ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು.
ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.
¶ ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
¶ ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.
¶ ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.
¶ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
¶ ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,
ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.
¶ ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.