TSK

TSK · ಆದಿಕಾಂಡ 46:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.

ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.

ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.

ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.

ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.