TSK

TSK · ಆದಿಕಾಂಡ 47:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.

¶ ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.

‹ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.›

‹ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!›

‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›