ಆದಿಕಾಂಡ 41:30
TSK
ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
TSK
Treasury of Scripture Knowledge references in ಕನ್ನಡ IRV.
ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
¶ “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.