TSK

TSK · ಆದಿಕಾಂಡ 47:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.

¶ ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.

¶ ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.

¶ ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.

ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.

¶ ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.

ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.

“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.

ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ

ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”

“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.

ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.