TSK

TSK · ಆದಿಕಾಂಡ 48:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.

ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.

¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

¶ “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.

ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.

¶ ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.