TSK

TSK · ಆದಿಕಾಂಡ 48:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.

ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.

ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

¶ ‹“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

¶ ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.

ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.

ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.

ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.