ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.
TSK
TSK · ಆದಿಕಾಂಡ 48:5
Treasury of Scripture Knowledge references in ಕನ್ನಡ IRV.
ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.
ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
¶ ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
¶ ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.
ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,