ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
TSK
TSK · ಆದಿಕಾಂಡ 48:7
Treasury of Scripture Knowledge references in ಕನ್ನಡ IRV.
¶ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ
ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.