TSK

TSK · ಆದಿಕಾಂಡ 50:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.

ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

‹ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.›

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.