TSK

TSK · ಆದಿಕಾಂಡ 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.

ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.

ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.

ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.