ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.
TSK
TSK · ಆದಿಕಾಂಡ 6:5
Treasury of Scripture Knowledge references in ಕನ್ನಡ IRV.
ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
¶ ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
¶ ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
‹ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.›
¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.