¶ ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
TSK
TSK · ಆದಿಕಾಂಡ 9:3
Treasury of Scripture Knowledge references in ಕನ್ನಡ IRV.
ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.
ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
¶ “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.