TSK

TSK · ಹಗ್ಗಾಯ 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.

¶ ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.

ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.

ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.

ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.

ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.

ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.

ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.

ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.

ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.

ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.

ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.