ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.
TSK
TSK · ಹಗ್ಗಾಯ 1:8
Treasury of Scripture Knowledge references in ಕನ್ನಡ IRV.
ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.
ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
¶ ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!
¶ ಅವನು ಹೊರಗೆ ಹೋದ ಮೇಲೆ ಯೇಸುವು, ‹“ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು›‹ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.›