TSK

TSK · ಹಗ್ಗಾಯ 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.

ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.

¶ ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”

ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

¶ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.

¶ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.