ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
TSK
TSK · ಇಬ್ರಿಯರಿಗೆ 10:3
Treasury of Scripture Knowledge references in ಕನ್ನಡ IRV.
¶ “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.