TSK

TSK · ಇಬ್ರಿಯರಿಗೆ 10:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.

ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.

“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.

“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.

ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.

ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

¶ ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.

ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.