TSK

TSK · ಇಬ್ರಿಯರಿಗೆ 11:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.

ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.

ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.

¶ ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.

ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

‹ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.›

‹ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”›

ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.

¶ ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.

ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.