¶ ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
TSK
TSK · ಇಬ್ರಿಯರಿಗೆ 11:7
Treasury of Scripture Knowledge references in ಕನ್ನಡ IRV.
ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
¶ ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
¶ ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
‹ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.›
‹ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.›
‹ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.›
ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.
¶ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.